ಗದಗ | ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ: ಆರೋಪಿ ಬಂಧನ
Update: 2025-04-09 16:30 IST
ಗದಗ : ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಆರೋಪಿ ತಂದೆಯನ್ನು ಬಂಧಿಸಿರುವ ಘಟನೆ ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ʼತನ್ನ ಪತಿ, 16 ವರ್ಷದ ಅಪ್ರಾಪ್ತ ಮಗಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ. ಈ ಕೃತ್ಯದಿಂದ ಬಾಲಕಿ ಗರ್ಭಿಣಿಯಾಗಿದ್ದಾಳೆʼ ಎಂದು ತಾಯಿ ದೂರು ನೀಡಿದ ನಂತರ ಈ ಘಟನೆ ಬಯಲಾಗಿದೆ.
ಬಾಲಕಿಯನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯಕೀಯ ಪರೀಕ್ಷೆಯ ನಂತರ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ತಾಯಿಯ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪೋಕ್ಸೊ (POCSO) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.