ಗದಗ: ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ
ಗದಗ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಗದಗ ನಗರದ ಜಿಲ್ಲಾಡಳಿತ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಡಿಸಿ ಸಿ ಎನ್ ಶ್ರೀಧರ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ ಜರುಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿದ ಶಿಕ್ಷಕರಿಗೆ ಹಾಗೂ ಪ್ರಬಂಧ ಸ್ಪರ್ದೇಯಲ್ಲಿ ವಿಜೇತರಾದವರಿಗೆ ಸನ್ಮಾನಿಸಲಾಯಿತು.
ಇನ್ನು ಕಾರ್ಯಕ್ರಮದಲ್ಲಿ ಎಸ್ಪಿ ರೋಹನ್ ಜಗದೀಶ್, ಗ್ಯಾರಂಟಿ ಯೋಜನೆಗಳ ಪ್ರಾದಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ,ಅಪರ ಜಿಲ್ಲಾಧಿಕಾರಿ ದುರಗೇಶ್ ಸೇರಿದಂತೆ ಅಧಿಕಾರಿಗಳು ಹಾಗೂ ಗಣ್ಯರು ಭಾಗವಹಿಸಿದ್ದರು.
ಡಿಸಿ ಸಿ ಎನ್ ಶ್ರೀಧರ್ ಮಾತನಾಡಿ, ಮಹಾತ್ಮ ಗಾಂಧೀಜಿಯವರು ಅಹಿಂಸೆ ಮತ್ತು ಸತ್ಯಾಗ್ರಹದ ಅಸ್ತ್ರದಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರು. ಗಾಂಧೀಜಿಯವರು ಇಂಗ್ಲೆಂಡಿನಲ್ಲಿ ಕಾನೂನು ಅಧ್ಯಯನ ಮಾಡಿ ನಂತರ ದಕ್ಷಿಣ ಆಫ್ರಿಕಾದಲ್ಲಿ ವಕೀಲ ವೃತ್ತಿಯಲ್ಲಿದ್ದಾಗ ಸವರ್ಣೀಯರ ದಬ್ಬಾಳಿಕೆ ಹಾಗೂ ಅಸ್ಪಶ್ಯತೆಯನ್ನು ಕಂಡು ಮರುಗಿದರು. ಭಾರತೀಯ ರಾಷ್ಟ್ರೀಯ ಕಾಂಗೆಸ್‌ನ ನಾಯಕತ್ವ ವಹಿಸಿದ ಬಳಿಕ ಬಡತನ ನಿವಾರಣೆ, ಅಸ್ಪೃಶ್ಯತೆ ವಿರುದ್ದ ಹೋರಾಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಅವರು ದೇಶಗಳಲ್ಲಿನ ಬಹಳಷ್ಟು ಕ್ಲಿಷ್ಟಕರ ಸಮಸ್ಯೆಗಳನ್ನೂ ಸಹ ಮಾತುಕತೆಯಿಂದ ಬಗೆಹರಿಸಬಹುದಾಗಿದೆ ಎಂದು ಸಮಾಜಕ್ಕೆ ತಿಳಿಸಿದವರು ಮಹಾತ್ಮಾ ಗಾಂಧಿಜೀ ಎಂದರು.