×
Ad

ಗದಗ: ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಮನೆ ಮೇಲೆ ಲೋಕಾಯುಕ್ತ ದಾಳಿ

Update: 2025-05-31 09:30 IST

 ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗಂಗಾಧರ ಶಿರೋಳ ಅವರ ಮನೆ, ಕಚೇರಿ ಹಾಗೂ ಅಳಿಯ ವಿಜಯ ಯಳಮೇಲಿ, ಭಾವ ನಾಗರಾಜ್ ಅಕ್ಕಿ ಮನೆಗಳ ಸಹಿತ ಆರು ಕಡೆ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.

ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ಎಸ್ ಎಸ್ ಶೆಟ್ಟರ್ ಹಾಗೂ ಹಾವೇರಿ ಜಿಲ್ಲೆಯಲ್ಲಿರುವ  ಅವರ ಸಂಬಧಿಕರ ಮನೆ ಮೇಲೆ ಸಹ ದಾಳಿ ನಡೆದಿದೆ.

ಲೋಕಾಯುಕ್ತ ಎಸ್ಪಿ ಹಣಮಂತರಾಯ, ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News