×
Ad

Gadag | ಕತ್ತು ಕೊಯ್ದು ಯುವಕನ ಭೀಕರ ಹತ್ಯೆ

Update: 2026-02-28 13:38 IST

ಮುಹಮ್ಮದ್‌ ಫಾರೂಕ್ ಶೇಖ್ ಸನದಿ (25)

ಗದಗ : ಯುವಕನ ಕತ್ತು ಕೊಯ್ದು ಭೀಕರ ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸಮೀಪದ ಜಮೀನೊಂದರಲ್ಲಿ ನಡೆದಿದೆ.

ಮೃತನನ್ನು ಮುಹಮ್ಮದ್‌ ಫಾರೂಕ್ ಶೇಖ್ ಸನದಿ (25) ಎಂದು ಗುರುತಿಸಲಾಗಿದೆ. ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹರ್ಲಾಪೂರ ಗ್ರಾಮದ ನಿವಾಸಿ ಆಗಿರುವ ಪಾರೂಕ್, ಸದ್ಯ ಶಿಗ್ಲಿ ಗ್ರಾಮದಲ್ಲಿ ವಾಸವಾಗಿದ್ದರು.

ದುಷ್ಕರ್ಮಿಗಳು ಕತ್ತು ಕೊಯ್ದು ಹತ್ಯೆ ನಡೆಸಿ, ಬಳಿಕ ಮೃತದೇಹವನ್ನು ಹೊಲದಲ್ಲಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ತಿಳಿದು ಸ್ಥಳಕ್ಕೆ ಗದಗ ಡಿಎಸ್ಪಿ ಮುರ್ತುಕಾ ಖಾದ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಹತ್ಯೆಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ನಿನ್ನೆ ತಡರಾತ್ರಿ ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ನಡೆದ ಎರಡು ಪ್ರತ್ಯೇಕ ಕೊಲೆಗಳಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕ ಮೂಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News