×
Ad

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ; ಆರೋಪಿಗಳು ಪರಾರಿ

Update: 2024-04-19 09:42 IST

ಹತ್ಯೆಗೀಡಾದ ಪರಶುರಾಮ, ಆಕಾಂಕ್ಷಾ ಮತ್ತು ಲಕ್ಷ್ಮೀ  

ಗದಗ: ನಗರಸಭೆ ಉಪಾಧ್ಯಕ್ಷೆಯ ಪುತ್ರ ಸಹಿತ ನಾಲ್ವರನ್ನು ಹತ್ಯೆಗೈದ ಘಟನೆ ನಗರದ ದಾಸರ ಓಣಿಯಲ್ಲಿ  ಗುರುವಾರ ಮಧ್ಯರಾತ್ರಿ ನಡೆದಿದೆ.

ಹತ್ಯೆಗೀಡಾದವರನ್ನು ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27) ಹಾಗೂ ಕೊಪ್ಪಳ ಮೂಲದ ಸಂಬಂಧಿಕರಾದ ಪರಶುರಾಮ (55) ಪತ್ನಿ ಲಕ್ಷ್ಮೀ (45) ಪುತ್ರಿ ಆಕಾಂಕ್ಷಾ (16)  ಎಂದು ಗುರುತಿಸಲಾಗಿದೆ. ಇವರು ಏಪ್ರಿಲ್‌ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದರು.

ರಾತ್ರಿ ವೇಳೆ ಮನೆಯ ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಈ ಮೂವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಮನೆ ಮಂದಿ ಪೊಲೀಸರಿಗೆ  ಫೋನಾಯಿಸುತ್ತಿರುವಾಗಲೇ ತಪ್ಪಿಸಿಕೊಂಡಿದ್ದಾರೆನ್ನಲಾಗಿದೆ.

ಘಟನಾ ಸ್ಥಳಕ್ಕೆ ಎಸ್ಪಿ ಬಿ ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿದ್ದು, ಶ್ವಾನದಳ, ಫಾರೆನ್ಸಿಕ್ ತಂಡಗಳಿಂದ ಪರಿಶೀಲನೆ ನಡೆಯುತ್ತಿದೆ.


 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News