×
Ad

ಗದಗ | ಮನೆಗಳಿಗೆ ನುಗ್ಗಿದ ಮಳೆ ನೀರು : ಸ್ಥಳಕ್ಕೆ ಅಧಿಕಾರಿಗಳ ಭೇಟಿ

Update: 2025-06-12 11:23 IST

ಗದಗ : ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಸುಮಾರು 15 ಮನೆಗಳಿಗೆ ನೀರು ನುಗ್ಗಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಕುಂದ್ರಳ್ಳಿ ಗ್ರಾಮದಲ್ಲಿ ನಡೆದಿದೆ.

ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸುಮಾರು 15 ಮನೆಗಳಿಗೆ ನೀರು ನುಗಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಲಕ್ಷ್ಮೇಶ್ವರ ತಹಶೀಲ್ದಾರ್‌ ವಾಸುದೇವ ಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ.

ಸುಮಾರು 15 ಮನೆಗಳಿಗೆ ನೀರು ನುಗ್ಗಿದ್ದರಿಂದ ರಾತ್ರಿ ಈಡೀ ನೀರು ಹೊರಹಾಕಲು ಕುಟುಂಬಸ್ಥರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಯಲ್ಲಿ ಶೇಕರಿಸಿಟ್ಟಿದ್ದ ದವಸ, ಧಾನ್ಯಗಳು ನೀರು ಪಾಲಾಗಿವೆ.

ಮಳೆಗೆ ಹಾನಿಯಾದ ಮನೆಯ ಕುಟುಂಬಸ್ಥರಿಗೆ ಮಲಗಲು ಅಧಿಕಾರಿಗಳು ತಾತ್ಕಾಲಿಕವಾಗಿ ಮಲಗಲು ಸರಕಾರಿ ಶಾಲೆಯಲ್ಲಿ ವ್ಯವಸ್ಥೆ ಕಲ್ಪಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News