×
Ad

ಗದಗ | ಅಗ್ನಿ ಅವಘಡದಿಂದಾಗಿ ಸುಟ್ಟು ಭಸ್ಮವಾದ ಬೇಕರಿ

Update: 2025-05-03 12:59 IST

ಗದಗ : ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಪಟ್ಟಣದ ನ್ಯೂ ಮಹಾಂತೇಶ ಬೇಕರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಪ್ರಾಥಮಿಕ ಮಾಹಿತಿಯಂತೆ, ಈ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವಾಗಿದೆ ಎನ್ನಲಾಗಿದೆ.

ಪಟ್ಟಣದ ಬಸ್ ನಿಲ್ದಾಣದ ಎದುರುಗಡೆಯಲ್ಲಿರುವ ಈ ಬೇಕರಿಯಲ್ಲಿ ರಾತ್ರಿ ಬೆಂಕಿ ಹೊತ್ತಿಕೊಂಡು ಕ್ಷಣಗಳಲ್ಲಿ ಜ್ವಾಲೆ  ವ್ಯಾಪಿಸಿತು. ಬೇಕರಿಯೊಳಗಿದ್ದ ಹಲವಾರು ತಿನಿಸು ಪದಾರ್ಥಗಳು, ಪರಿಕರಗಳು ಮತ್ತು ಇತರೆ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ.

ಸ್ಥಳಕ್ಕೆ ತಕ್ಷಣವೇ ಮುಂಡರಗಿ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದ್ದಾರೆ.

ಅವಘಡದ ಮಾಹಿತಿಯ ನಂತರ ತಹಶೀಲ್ದಾರ್‌ ಪಿ.ಎಸ್. ಯರ್ರಿಸ್ವಾಮಿ ಹಾಗೂ ಪುರಸಭೆ ಸದಸ್ಯರು ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News