×
Ad

ಗದಗ| ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯಶ್ ಅಭಿಮಾನಿ ಸಾವು

Update: 2024-01-09 13:16 IST

ಗದಗ: ನೆಚ್ಚಿನ ನಟ ಯಶ್ ಅವರನ್ನು ನೋಡುವ ಭರದಲ್ಲಿ ದ್ವಿಚಕ್ರ ವಾಹನದಲ್ಲಿ ವೇಗವಾಗಿ ಚಲಿಸುತ್ತಿದ್ದ ವೇಳೆ ಪೊಲೀಸ್ ವಾಹನಕ್ಕೆ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ.

ಭಾನುವಾರ ರಾತ್ರಿ ಚಿತ್ರನಟ ಯಶ್ ಅವರ ಹುಟ್ಟುಹಬ್ಬ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದ ಮೂವರು ಅಭಿಮಾನಿಗಳ ಮನೆಗೆ ಭೇಟಿ ನೀಡಿದ ನಟ ಯಶ್‌, ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಅಭಿಮಾನಿಗಳನ್ನು ಅಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.  ಯೋಗಕ್ಷೇಮ ವಿಚಾರಿಸಿ ವಾಪಾಸು ಹೋಗುವಾಗ ಅವರ ವಾಹನ ಬೆನ್ನತ್ತಿ ಹೊರಟಿದ್ದ ದ್ವಿಚಕ್ರ  ವಾಹನ ಸವಾರ ನಿಖಿಲ್ ಗೌಡರ್(22) ಪೊಲೀಸ್ ವಾಹನಕ್ಕೆ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಎನ್ನಲಾಗಿದೆ.

ಮೃತ ನಿಖಿಲ್ ಲಕ್ಷ್ಮೇಶ್ವರ ತಾಲೂಕಿನ ಅಗಡಿಯಲ್ಲಿ ಎಂಜನಿಯರಿಂಗ್  ಓದುತ್ತಿದ್ದ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News