×
Ad

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿಗೆ ಅವಮಾನ ಖಂಡಿಸಿ ಗದಗದಲ್ಲಿ ಬೃಹತ್ ಪ್ರತಿಭಟನೆ

Update: 2025-10-07 14:45 IST

ಗದಗ : ಡಾ.ಬಾಬಾ ಸಾಹೇಬ ಅಂಬೇಡ್ಕರ ಅವರ ಅನುಯಾಯಿಗಳಾದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರ ಮೇಲೆ ಕೋರ್ಟ ಹಾಲ್ ನಲ್ಲಿ ಸನಾತನವಾದಿ ವಕೀಲ ರಾಕೇಶ ಕಿಶೋರ್ ಎಂಬ ವ್ಯಕ್ತಿ ಗವಾಯಿಯವರು ಸನಾತನವಾದಕ್ಕೆ ಅವಮಾನ ಮಾಡಿದ್ದಾರೆಂದು ಅವರಿಗೆ ತನ್ನ ಶೂ ಬಿಚ್ಚಿ ಮುಖ್ಯ ನ್ಯಾಯಮೂರ್ತಿ ಗಳಿಗೆ ಎಸೆಯಲು ಪ್ರಯತ್ನಿಸಿದಾಗ ಅಲ್ಲಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಡೆದು ಹೊರಗಡೆ ಎಳೆದುಕೊಂಡು ಹೋಗಿದ್ದಾರೆ.

ಈ ಘಟನೆಯಿಂದ ಇಡೀ ದೇಶದ ದಲಿತರ ಮನಸಿಗೆ ಘಾಸಿಯಾಗಿದೆ. ರಾಕೇಶ ಕಿಶೋರ್ ಅನ್ನುವ ಸನಾತನವಾದಿ ಜಸ್ಟಿಸ್ ಗವಾಯಿ ಅವರಿಗೆ ಮಾತ್ರ ಅವಮಾನ ಮಾಡಿಲ್ಲ ಇಡೀ ನ್ಯಾಯಾಂಗ ವ್ಯವಸ್ಥೆಗೆ ಹಾಗೂ ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ. ಕೊಡಲೇ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ರಾಕೇಶ್ ಕಿಶೋರ್ ನನ್ನು ದೇಶದ್ರೋಹದ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿ ನಾಳೆ 08.10.25 ಬುದವಾರ ಬೆಳಗ್ಗೆ 10.30 ಕ್ಕೆ ಗದಗ ನಗರದ ಗಾಂಧಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘಟನೆಗಳ ಒಕ್ಕೂಟ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News