ಗದಗ |ಶಾಸಕ ಜಿ.ಎಸ್ ಪಾಟೀಲ್‌ರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿಗಳು
Update: 2025-11-22 17:33 IST
ಗದಗ: ಜಿಲ್ಲೆಯ ರೋಣ ಮತಕ್ಣೇತ್ರದ ಶಾಸಕ ಜಿ.ಎಸ್ ಪಾಟೀಲಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಗಜೇಂದ್ರಗಡ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ಹೋರಾಟದ ವೇಳೆ, ಅಭಿಮಾನಿಗಳಿಬ್ಬರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ಈ ವೇಳೆ ದಿಂಡೂರ ಗ್ರಾಮದ ಸಂಗಪ್ಪ ತೇಜಿ ಹಾಗೂ ಮಾರನಬಸರಿ ಗ್ರಾಮದ ರವಿಕುಮಾರ್ ಗಡಾದ್ ಎಂಬ ಇಬ್ಬರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿಗಳನ್ನು ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ತಡೆದರು.
ಕಾಲಕಾಲೇಶ್ವರ ಸರ್ಕಲ್ ನಲ್ಲಿ ರಸ್ತೆ ಬಂದ್ ಮಾಡಿ ಮಾನವ ಸರಪಳಿ ನಿರ್ಮಿಸಿ ಜಿ.ಎಸ್ ಪಾಟೀಲ್ ಅಭಿಮಾನಿಗಳು ತಮ್ಮ ಆಕ್ರೋಶ ಹೊರಹಾಕಿದರು.