ಶಿರಹಟ್ಟಿ | ಡಾ.ಚಂದ್ರು ಲಮಾಣಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Update: 2026-02-23 13:58 IST
ಗದಗ: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ವಿರುದ್ಧ ಶಿರಹಟ್ಟಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ವತಿಯಿಂದ ಶಿರಹಟ್ಟಿಯಲ್ಲಿ ಇಂದು ಪ್ರತಿಭಟನೆ ನಡೆಯಿತು.
ಡಾ. ಚಂದ್ರುರನ್ನು ಶಾಸಕ ಸ್ಥಾನದಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು ಶಿರಹಟ್ಟಿ ಪೇಟೆ ಆಂಜನೇಯ ದೇವಸ್ಥಾನದಿಂದ ತಹಶಿಲ್ದಾರ್ ಕಚೇರಿಯ ವರೆಗೆ ಪ್ರತಿಭಟನಾ ಜಾಥಾ ನಡೆಸಿದರು.
ಬಳಿಕ ಡಾ.ಚಂದ್ರುರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಸುಜಾತ ದೊಡ್ಡಮನಿ ಸೇರಿದಂತೆ ಕಾಂಗ್ರೆಸ್ ಮುಖಂಡರು,
ನೂರಾರು ಕಾಂಗ್ರೇಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.