×
Ad

ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ: 9 ಮಂದಿ ಭಾರತೀಯರು ಮೃತ್ಯು

Update: 2025-01-29 17:39 IST

ಸಾಂದರ್ಭಿಕ ಚಿತ್ರ 

ಜಿದ್ದಾ: ಸೌದಿ ಅರೇಬಿಯಾದ ಪಶ್ಚಿಮ ವಲಯದ ಜಿಝಾನ್ ಬಳಿ ರಸ್ತೆ ಅಪಘಾತದಲ್ಲಿ 9 ಮಂದಿ ಭಾರತೀಯರು ಮೃತಪಟ್ಟಿದ್ದಾರೆ ಎಂದು ಜಿದ್ದಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ.

ಭಾರತೀಯ ರಾಯಭಾರಿ ಕಚೇರಿಯು ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಜಿಝಾನ್ ಬಳಿ ರಸ್ತೆ ಅಪಘಾತದಲ್ಲಿ 9 ಮಂದಿ ಭಾರತೀಯರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತರ ಕುಟುಂಬಕ್ಕೆ ಸಂಪೂರ್ಣ ಬೆಂಬಲವನ್ನು ನೀಡಲಾಗುವುದು. ಸ್ಥಳೀಯ ಅಧಿಕಾರಿಗಳು ಮತ್ತು ಸಂತ್ರಸ್ತರ ಸಂಬಂಧಿಕರೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾವು ಹಾರೈಸುತ್ತೇವೆ ಎಂದು ಹೇಳಿದೆ.

ಘಟನೆ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಪ್ರತಿಕ್ರಿಯಿಸಿದ್ದು, ಈ ಅಪಘಾತ ಮತ್ತು ಜೀವಹಾನಿಯ ಬಗ್ಗೆ ತಿಳಿದು ದುಃಖವಾಗಿದೆ. ಸಂತ್ರಸ್ತ ಕುಟುಂಬಗಳಿಗೆ ಸಂತಾಪಗಳು. ಜಿದ್ದಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಅಧಿಕಾರಿಗಳು ಮತ್ತು ಸಂತ್ರಸ್ತ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News