×
Ad

ಗಲ್ಫ್ ರಾಷ್ಟ್ರಗಳಿಗೆ ತೆರಳಿದ್ದ ಸರ್ವಪಕ್ಷ ನಿಯೋಗದ ಭಾಗವಾಗಿದ್ದ ಗುಲಾಂ ನಬಿ ಆಝಾದ್ ಕುವೈತ್‌ನಲ್ಲಿ ಆಸ್ಪತ್ರೆಗೆ ದಾಖಲು

Update: 2025-05-28 10:26 IST

Photo: X/@PandaJay


ರಿಯಾದ್: ಗಲ್ಫ್ ರಾಷ್ಟ್ರಗಳಿಗೆ ತೆರಳಿದ್ದ ಸರ್ವಪಕ್ಷ ನಿಯೋಗದ ಭಾಗವಾಗಿರುವ ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಝಾದ್ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಅವರನ್ನು ಕುವೈತ್‌ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಜೆಪಿ ಸಂಸದ ಬೈಜಯಂತ್ ಜೇ ಪಾಂಡಾ ಮಂಗಳವಾರ ತಿಳಿಸಿದ್ದಾರೆ.

ಬೈಜಯಂತ್ ಜೇ ಪಾಂಡಾ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ನಮ್ಮ ನಿಯೋಗದ ಭಾಗವಾಗಿದ್ದ ಗುಲಾಂ ನಬಿ ಆಝಾದ್ ಅವರನ್ನು ಪ್ರವಾಸದ ಅರ್ಧದಲ್ಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರು ಅವರಿಗೆ ಕೆಲ ಪರೀಕ್ಷೆಗಳನ್ನು ನಡೆಸಲಿದ್ದಾರೆ. ಅವರು ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ. ಬಹ್ರೇನ್ ಮತ್ತು ಕುವೈತ್‌ನಲ್ಲಿ ನಡೆದ ಸಭೆಯಲ್ಲಿ ಅವರು ಭಾಗಿಯಾಗಿದ್ದರು. ಸೌದಿ ಅರೇಬಿಯಾ ಮತ್ತು ಅಲ್ಜೀರಿಯಾದಲ್ಲಿ ಅವರ ಅನುಪಸ್ಥಿತಿಯಲ್ಲಿ ಸಭೆ ನಡೆಯಲಿದೆ ಎಂದು ಹೇಳಿದರು.

ಈ ಕುರಿತು ಗುಲಾಂ ನಬಿ ಆಝಾದ್ ಅವರು ಸ್ವತಃ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಕುವೈತ್‌ನಲ್ಲಿರುವ ವಿಪರೀತ ಉಷ್ಣತೆ ನನ್ನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದರೂ, ದೇವರ ದಯೆಯಿಂದ ನಾನು ಚೆನ್ನಾಗಿದ್ದೇನೆ ಮತ್ತು ಚೇತರಿಸಿಕೊಳ್ಳುತ್ತಿದ್ದೇನೆ. ನಿಮ್ಮ ಕಾಳಜಿ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News