ಆ. 21ರಂದು KCF ಬಹರೈನ್ ಅಂತಾರಾಷ್ಟ್ರೀಯ ಗ್ರಾಂಡ್ ಈದ್ ಮೀಲಾದ್ ಕಾನ್ಫರೆನ್ಸ್

Update: 2026-08-09 23:58 IST

ಮನಾಮ, ಆ. 9: ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ಬಹರೈನ್ ವತಿಯಿಂದ ‘ಪ್ರವಾದಿ(ಸ.ಅ)ರವರ ಜೀವನ ಮಾನವತೆಗೆ ಮಾದರಿ’ ಎಂಬ ಘೋಷವಾಕ್ಯದೊಂದಿಗೆ ಅಂತಾರಾಷ್ಟ್ರೀಯ ಗ್ರಾಂಡ್ ಈದ್ ಮೀಲಾದ್ ಕಾನ್ಫರೆನ್ಸ್–2026 ಅನ್ನು ಆ. 21ರಂದು ಮನಾಮ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ.

ಮಗ್ರಿಬ್ ನಮಾಝಿನ ಬಳಿಕ ಮೌಲಿದ್ ಹಾಗೂ ಬುರ್ದಾ ಮಜ್ಲಿಸಿನೊಂದಿಗೆ ಕಾರ್ಯಕ್ರಮ ಆರಂಭವಾಗಲಿದ್ದು, ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ.

ಯುವ ವಾಗ್ಮಿ ನೌಫಲ್ ಸಖಾಫಿ ಕಳಸ ಉಸ್ತಾದರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಹಲವಾರು ಉಲಮಾ, ಉಮರಾ, ನೇತಾರರು ಹಾಗೂ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಖಲಂದರ್ ಉಸ್ತಾದರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News