×
Ad

ಕುವೈತ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ 'ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್' ಸ್ವೀಕರಿಸಿದ ಪ್ರಧಾನಿ ಮೋದಿ

Update: 2024-12-22 16:40 IST

Photo credit: X/@narendramodi

ಹೊಸದಿಲ್ಲಿ: ಕುವೈತ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಕುವೈತ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ 'ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್'(The Order of Mubarak Al Kabeer) ಅನ್ನು ನೀಡಿ ಕುವೈತ್ ಸರಕಾರ ಗೌರವಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಕುವೈತ್ ನ ಅಮೀರ್ ಶೇಖ್ ಮಿಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್ ಸಬಾಹ್ ಅವರಿಂದ 'ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್ ' ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಇದು ಪ್ರಧಾನಿ ಮೋದಿಗೆ ದೊರೆತ 20ನೇ ಅಂತಾರಾಷ್ಟ್ರೀಯ ಗೌರವ ಪ್ರಶಸ್ತಿಯಾಗಿದೆ ಎಂದು ಹೇಳಲಾಗಿದೆ. 'ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್' ಗೌರವ ಪ್ರಶಸ್ತಿಯನ್ನು ಮಿತ್ರರಾಷ್ಟ್ರಗಳ ಮುಖ್ಯಸ್ಥರು ಮತ್ತು ವಿದೇಶಿ ರಾಜಮನೆತನದ ಸದಸ್ಯರಿಗೆ ಸ್ನೇಹದ ಸಂಕೇತವಾಗಿ ನೀಡಲಾಗುತ್ತದೆ.

ಈ ಹಿಂದೆ ಬಿಲ್ ಕ್ಲಿಂಟನ್, ಪ್ರಿನ್ಸ್ ಚಾರ್ಲ್ಸ್ ಮತ್ತು ಜಾರ್ಜ್ ಬುಷ್ ಅವರಂತಹ ವಿದೇಶಿ ನಾಯಕರಿಗೆ ಕುವೈತ್ ನ ಅತ್ಯುನ್ನತ ಗೌರವ 'ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್' ಅನ್ನು ನೀಡಿ ಗೌರವಿಸಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕುವೈತ್ ಪ್ರವಾಸದಲ್ಲಿದ್ದಾರೆ. 43 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ಕುವೈತ್ ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ 26ನೇ ಅರೇಬಿಯನ್ ಗಲ್ಫ್ ಕಪ್ ಉದ್ಘಾಟನಾ ಸಮಾರಂಭದಲ್ಲಿ ಗೌರವ ಅತಿಥಿಯಾಗಿ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News