×
Ad

UAE | ಅಬುಧಾಬಿಯಲ್ಲಿ ರಸ್ತೆ ಅಪಘಾತ: ಭಾರತೀಯ ಮೂಲದ ಮೂವರು ಮಕ್ಕಳು ಸಹಿತ ನಾಲ್ವರು ಮೃತ್ಯು

Update: 2026-01-05 15:39 IST

ಸಾಂದರ್ಭಿಕ ಚಿತ್ರ 

ಅಬುಧಾಬಿ (ಯುಎಇ): ಶನಿವಾರ ಮುಂಜಾನೆ ಅಬುಧಾಬಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಕ್ಕಳು ಹಾಗೂ ಮನೆ ಸಹಾಯಕಿಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಒಡಹುಟ್ಟಿದವರಾದ ಅವರೆಲ್ಲರೂ ತಮ್ಮ ಕುಟುಂಬದ ಮನೆ ಸಹಾಯಕಿಯೊಂದಿಗೆ ವಾಹನದಲ್ಲಿ ಪ್ರಯಾಣಿಸುವಾಗ ಅಬುಧಾಬಿ-ದುಬೈ ಹೆದ್ದಾರಿಯ ಶಹಾಮಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ತಕ್ಷಣವೇ ತುರ್ತು ಸೇವೆಗಳಿಗೆ ಮಾಹಿತಿ ನೀಡಿದರೂ, ಅವರೆಲ್ಲರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ.

ಕೇರಳ ಮೂಲದ ಕುಟುಂಬವೊಂದಕ್ಕೆ ಸೇರಿದ ಈ ಮೂವರು ಮಕ್ಕಳು ರಾಸ್ ಅಲ್ ಖೈಮಾ ದಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಅಪಘಾತ ಸಂಭವಿಸಿದಾಗ ಅವರು ಯುಎಇ ರಾಜಧಾನಿ ಅಬುಧಾಬಿಯಲ್ಲಿ ಆಯೋಜನೆಗೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮುಗಿಸಿಕೊಂಡು ಮನೆಗೆ ಮರಳುತ್ತಿದ್ದರು ಎಂದು ಹೇಳಲಾಗಿದೆ.

 ರಸ್ತೆ ಅಪಘಾತಕ್ಕೆ ಕಾರಣವೇನು ಎಂಬ ಕುರಿತು ಪೊಲೀಸರು ಯಾವುದೇ ಮಾಹಿತಿಯನ್ನು ನೀಡಿಲ್ಲ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News