×
Ad

ಹನೂರು : ವಿದ್ಯುತ್ ತಂತಿ ತಗುಲಿ ಬೆಂಕಿ ಆಕಸ್ಮಿಕ; ಲಾರಿಯಲ್ಲಿ ಸಾಗಿಸುತ್ತಿದ್ದ ಮೇವು ಸಂಪೂರ್ಣ ಭಸ್ಮ

Update: 2026-01-21 08:10 IST

ಚಾಮರಾಜನಗರ: ವಿದ್ಯುತ್ ತಂತಿ ತಗುಲಿ ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಮೇವು ಬೆಂಕಿ ಪಾಲಾಗಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಪೆದ್ದನಪಾಳ್ಯದಲ್ಲಿ ನಡೆದಿದೆ.

ಪೆದ್ದನಪಾಳ್ಯ ಗ್ರಾಮದ ಸಿದ್ದರಾಜು ಎಂಬ ರೈತ ಮೇವು ಖರೀದಿಸಿ, ಅದನ್ನು ಈಚರ್ ವಾಹನದಲ್ಲಿ ತುಂಬಿಕೊಂಡು ಸ್ವಗ್ರಾಮಕ್ಕೆ ಮರಳುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಆಕಸ್ಮಿಕವಾಗಿ ಮೇವಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದೆ. ವಾಹನ ಚಲಿಸುತ್ತಿದ್ದಂತೆಯೇ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದು, ಮೇವು ಧಗಧಗನೆ ಉರಿಯಲಾರಂಭಿಸಿತು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ನೀರು ಸುರಿದು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಬೆಂಕಿ ಹೊತ್ತಿಕೊಂಡಿದ್ದರೂ ಚಾಲಕ ಸಮಯಪ್ರಜ್ಞೆ ಮೆರೆದು ವಾಹನವನ್ನು ನೀರಿರುವ ಸುರಕ್ಷಿತ ಜಾಗದತ್ತ ಚಲಾಯಿಸಿಕೊಂಡು ಹೋಗಿದ್ದಾರೆ.

ಆದರೆ ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಮೇವು ಸಂಪೂರ್ಣವಾಗಿ ಭಸ್ಮವಾಗಿದೆ. ಅದೃಷ್ಟವಶಾತ್ ವಾಹನದಲ್ಲಿದ್ದ ಚಾಲಕ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News