×
Ad

ಹಾಸನ | ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Update: 2025-08-27 19:57 IST
ಸಾಂದರ್ಭಿಕ ಚಿತ್ರ |PC : freepik

ಹಾಸನ : ತಾಲ್ಲೂಕಿನ ಯರೇಹಳ್ಳಿ ಗ್ರಾಮದ ಬಳಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮಂಗಳವಾರ ತಡ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.

ಮೃತನನ್ನು ಹಾಸನ ನಗರದ ದೊಡ್ಡಮಂಡಿಗನಹಳ್ಳಿಯ ನಿವಾಸಿ ಅಂಕಿತ್ (26) ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ ಅಂಕಿತ್ ಬೈಕ್‌ನಲ್ಲಿ ರಾಗಿಮುದ್ದನಹಳ್ಳಿ ಗ್ರಾಮದ ಕಡೆಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಹಠಾತ್‌ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ದುಷ್ಕರ್ಮಿಗಳು ಅಂಕಿತ್ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ದಾಳಿ ನಡೆಸಿದವರ ಪತ್ತೆಗೆ ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News