ಹಾಸನ | ಲೋಕಾಯುಕ್ತ ದಾಳಿ: ಇಬ್ಬರ ಬಂಧನ
Update: 2025-09-10 23:56 IST
ಹಾಸನ : ನಗರದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ನಗರದ ಎನ್.ಆರ್.ವೃತ್ತದಲ್ಲಿರುವ ಪಂಚಾಯತ್‌ರಾಜ್ ಇಂಜಿನಿಯರ್ ಕಚೇರಿಯ ಸೂಪರಿಡೆಂಟ್ ರಾಮಚಂದ್ರು ಹಾಗೂ ಎಫ್‌ಡಿಎ ಲತಾ ಎಂಬವರು ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಕಾಮಗಾರಿ ಬಿಲ್ ಮಂಜೂರಾತಿಗಾಗಿ ಬೇಲೂರಿನ ಶಶಿ ಎಂಬವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಅಧಿಕಾರಿಗಳು, ತಲಾ ಸಾವಿರ ರೂಪಾಯಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದರು.
ಇನ್‌ಸ್ಪೆಕ್ಟರ್‌ಗಳಾದ ಚಂದ್ರಶೇಖರ್ ಮತ್ತು ಶಿಲ್ಪಾ ಅವರ ನೇತೃತ್ವದಲ್ಲಿ ದಾಳಿ ನಡೆಯಿತು. ಬಳಿಕ ಲಂಚದ ಹಣದ ಸಮೇತ ಇಬ್ಬರನ್ನೂ ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಲಾಗಿದೆ.