×
Ad

Hassan | ಆಲೂರಿನಲ್ಲಿ ಆ್ಯಕ್ಸಿಡೆಂಟ್: ರಸ್ತೆ ದಾಟುತ್ತಿದ್ದ ಕೆಎಸ್ಸಾರ್ಟಿಸಿ ಟಿಕೆಟ್ ತಪಾಸಣೆ ಇನ್ ಸ್ಪೆಕ್ಟರ್ ಮೃತ್ಯು

Update: 2025-12-13 10:24 IST

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕ್ಯಾಂಟ‌ರ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಕರ್ತವ್ಯದಲ್ಲಿದ್ದ ಕೆಎಸ್ಸಾರ್ಟಿಸಿ ಟಿಕೆಟ್ ತಪಾಸಣೆ ಇನ್ ಸ್ಪೆಕ್ಟರ್ ರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಲೂರು ತಾಲೂಕಿನ ಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕೆಎಸ್ಸಾರ್ಟಿಸಿ ಹಾಸನ ವಿಭಾಗೀಯ ತನಿಖಾ ಸಂಚಾರ ನಿಯಂತ್ರಕ ದಳದ ತಪಾಸಣೆ ಇನ್ ಸ್ಪೆಕ್ಟರ್ ಶಕುನಿ ಗೌಡ (57) ಮೃತಪಟ್ಟವರು.

ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಬಸ್ ಅನ್ನು ತಡೆದು, ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸುವ ಉದ್ದೇಶದಿಂದ ಶಕುನಿ ಗೌಡ ರಸ್ತೆ ದಾಟುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಏಕಾಏಕಿ ವೇಗವಾಗಿ ಬಂದ ಕ್ಯಾಂಟ‌ರ್ ವಾಹನ ಅವರಿಗೆ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ.

ಢಿಕ್ಕಿ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಶಕುನಿಗೌಡ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಚಾಲಕನ ಪತ್ತೆಗೆ ತನಿಖೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News