×
Ad

ಅರಕಲಗೂಡು | ಸಾರಿಗೆ ಬಸ್-ಬೈಕ್‌ ನಡುವೆ ಢಿಕ್ಕಿ : ಇಬ್ಬರು ಯುವಕರು ಮೃತ್ಯು

Update: 2025-12-09 10:13 IST

ಸಾಂದರ್ಭಿಕ ಚಿತ್ರ

ಅರಕಲಗೂಡು : ತಾಲೂಕಿನ ಕೊಣನೂರು ಗ್ರಾಮದಲ್ಲಿ ಬೈಕ್‌ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಮೃತರನ್ನು ಕೆರೆಕೋಡಿ ಗ್ರಾಮದ ಅನಿಲ್ (28) ಹಾಗೂ ಹೊನ್ನೇಗೌಡ (30) ಎಂದು ಗುರುತಿಸಲಾಗಿದೆ.

ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗದಲ್ಲಿ ಸರಕಾರಿ ಸಾರಿಗೆ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಅನಿಲ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಹೊನ್ನೇಗೌಡ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News