×
Ad

ಅರಕಲಗೂಡು | ಬೈಕ್ ಮತ್ತು ಪಿಕಪ್ ವಾಹನದ ನಡುವೆ ಢಿಕ್ಕಿ : ಇಬ್ಬರು ಮೃತ್ಯು

Update: 2024-10-19 22:59 IST

ಅರಕಲಗೂಡು : ಬೈಕ್ ಮತ್ತು ಪಿಕಪ್ ವಾಹನದ ನಡುವೆ ಮುಖಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಬೈಕ್ ಸವಾರರು ಮೃತಪಟ್ಟು, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಅರಕಲಗೂಡು ತಾಲೂಕಿನ ಮಾದಿಹಳ್ಳಿ- ಬರಗೂರು ನಡುವೆ ನಡೆದಿದೆ.

ಅಸ್ಸಾಂ ಮೂಲದ ವಲಸೆ ಕಾರ್ಮಿಕರಾದ ಕಾಸೀಂ (35) ಸ್ಥಳದಲ್ಲೇ ಮೃತಪಟ್ಟಿದ್ದು, ಹಾಲಿಂ ಎಂಬವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಮತ್ತೋರ್ವ ಮೆರದುಲ್ ತೀವ್ರವಾಗಿ ಗಾಯಗೊಂಡಿದ್ದು, ಹಾಸನದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಅರಕಲಗೂಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News