×
Ad

ಬೇಲೂರು | ರಸ್ತೆ ಬದಿ ನಿಲ್ಲಿಸಿದ್ದ ಎರಡು ಲಾರಿಗಳಿಗೆ ಆಕಸ್ಮಿಕ ಬೆಂಕಿ

Update: 2025-02-01 19:33 IST

ಬೇಲೂರು : ಬೇಲೂರು ತಾಲೂಕು ಆಫೀಸ್‌ನ ಹಿಂಬಾಗ ಇರುವ ದಿವ್ಯಾ ಕಾನ್ವೆಂಟ್ ಪಕ್ಕ ರಸ್ತೆ ಬದಿ ನಿಲ್ಲಿಸಿದ್ದ ಎರಡು ಗೂಡ್ಸ್ ಲಾರಿಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿವೆ.

ಅಪರಿಚಿತರು ಬೀಡಿ ಅಥವಾ ಸಿಗರೇಟು ಸೇದಲು ಬೆಂಕಿ ಕಡ್ಡಿ ಹಚ್ಚಿಕೊಂಡು ಎಸೆದ ಕಾರಣದಿಂದಲೇ ಬೆಂಕಿ ಹತ್ತಿರಬಹುದು ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಶಂಕೆ ವ್ಯಕ್ತಪಡಿಸಿದ್ದಾರೆ.

ಮಾಹಿತಿ ದೊರಕಿದ ಕೂಡಲೇ ಅಗ್ನಿಶಾಮಕದಳ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದರೆ, ಅದಾಗಲೇ ಲಾರಿಗಳು ಸಂಪೂರ್ಣ ಭಸ್ಮವಾಗಿದ್ದವು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಥಳಕ್ಕೆ ಸಬ್ ಇನ್ಸ್‌ಪೆಕ್ಟರ್ ಎಸ್.ಜಿ. ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News