×
Ad

ಬೇಲೂರು: ಬೈಕ್‌ನಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಅರೋಪಿ ಬಂಧನ

Update: 2024-10-03 14:25 IST

ಹಾಸನ: ಅ 3: ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರ ನಡೆಸಿರುವ ಘಟನೆ ಬೇಲೂರು ತಾಲೂಕಿನಲ್ಲಿ ನಡೆದಿದೆ.

ಆರೋಪಿಯನ್ನು ಜೆ.ಸುರಪುರ ಗ್ರಾಮದ ಕೇಶವಮೂರ್ತಿ ಎಂದು ಗುರುತಿಸಲಾಗಿದ್ದು, ಪೋಲಿಸರು ವಶಕ್ಕೆ ಪಡೆದಿದ್ದಾರೆ.

ನಾಲ್ಕು ತಿಂಗಳ ಹಿಂದೆ ಅಸ್ಸಾಂನಿಂದ ಕೂಲಿ ಕೆಲಸಕ್ಕೆ ಬಂದಿದ್ದ ಮಹಿಳೆ ಆರ್‌ಎಂಸಿಯಲ್ಲಿ ಶುಂಠಿ ವಾಷಿಂಗ್ ಕೆಲಸ ಮಾಡಿಕೊಂಡಿದ್ದರು. ಸೆ.30 ರಂದು ಆರ್‌ಎಂಸಿಗೆ ಕೆಲಸಕ್ಕೆ ತೆರಳಲು ವಾಹನ ಕಾಯುತ್ತಿದ್ದ ಮಹಿಳೆಗೆ ಡ್ರಾಪ್ ನೀಡುವುದಾಗಿ ಬೈಕ್ ಗೆ ಹತ್ತಿಸಿಕೊಂಡ ಆರೋಪಿ ಆಕೆಯನ್ನು ಜೋಳದ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ಸಂತ್ರಸ್ತ ಮಹಿಳೆ ಬೇಲೂರು ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News