ಬೇಲೂರು | ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು
Update: 2025-09-21 10:34 IST
ಹಾಸನ: ಸೆ.21: ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಾಲಯದ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಅವಮಾನಿಸಿರುವ ಘಟನೆ ನಡೆದಿದೆ.
ಪ್ರತಿದಿನ ಪೂಜೆ ನಡೆಯುವ ಈ ಗಣಪತಿಗೆ ಬೆಳಗ್ಗೆ ಭಕ್ತಾಧಿಗಳು ಕೈಮುಗಿಯಲು ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಮೂರ್ತಿಗೆ ಹಾನಿ ಮಾಡಲು ಯತ್ನಿಸಿರುವ ಕಿಡಿಗೇಡಿಗಳು ದೇವಾಲಯದ ಗೇಟ್ ತೆರೆದು ಒಳಗೆ ನುಗ್ಗಿ ಅವಮಾನ ಮಾಡಿದ್ದಾರೆ ಎನ್ನಲಾಗಿದೆ. ಮಾಹಿತಿ ದೊರಕುತ್ತಿದ್ದಂತೆ ಬೇಲೂರು ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಪಟ್ಟಣದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಭಕ್ತರು ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದು, ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ.