×
Ad

ಬೇಲೂರು | ಚಲಿಸುತ್ತಿದ್ದ ಲಾರಿ ಬೆಂಕಿಗಾಹುತಿ

Update: 2026-07-06 14:55 IST

ಬೇಲೂರು, ಜು.6: ಚಲಿಸು ತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಕೆಲವೇ ಕ್ಷಣಗಳಲ್ಲಿ ಲಾರಿ ಭಾಗಶಃ ಹೊತ್ತಿ ಉರಿದ ಘಟನೆ ಬೇಲೂರು ತಾಲೂಕಿನ ಹಳೇಬೀಡು ಸಮೀಪದ ಹೆಬ್ಬಾಳು ಬಳಿ

ಸೋಮವಾರ ನಡೆದಿದೆ.

ಮಂಗಳೂರಿನಿಂದ ಹಿರಿಯೂರು ಕಡೆಗೆ ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿ ಸಂಚರಿಸುತ್ತಿರುವಾಗಲೇ ಬೆಂಕಿ ಕಾಣಿಸಿಕೊಂಡಿದೆ. ಪರಿಸ್ಥಿತಿಯನ್ನು ಗಮನಿಸಿದ ಚಾಲಕ ತಕ್ಷಣವೇ ಲಾರಿಯನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಕೆಳಗಿಳಿದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಲಾರಿಯ ಬಹುತೇಕ ಭಾಗಕ್ಕೆ ವ್ಯಾಪಿಸಿ ವಾಹನ ಭಾಗಶಃ ಸುಟ್ಟುಹೋಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಈ ಘಟನೆ ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News