×
Ad

ಬೇಲೂರು : ಇಬ್ಬರು ಮಹಿಳೆಯರ ಮೇಲೆ ಕಾಡಾನೆ ದಾಳಿ; ಆಸ್ಪತ್ರೆಗೆ ದಾಖಲು

Update: 2025-01-27 12:18 IST

ಸಾಂದರ್ಭಿಕ ಚಿತ್ರ

ಹಾಸನ: ಜ, 27:  ಕೆಲಸಕ್ಕೆ ತೆರಳುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಗಂಭೀರ ಗಾಯಗಗೊಂಡ ಮಹಿಳೆಯರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಎಸ್ಟೇಟ್‌ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಗೀತಾ (40) ಮತ್ತು ಹೇಮ (38) ಗಾಯಗೊಂಡ ಮಹಿಳೆಯರು.  ಕಾಫಿ ಎಸ್ಟೇಟ್‌ಗೆ ಹೋಗುತ್ತಿದ್ದ ಸಂದರ್ಭದಲ್ಲಿ ಕಾಡಾನೆಯು ಸೊಂಡಿಲಿನಿಂದ ಎತ್ತಿ ಬಿಸಾಡಿ, ತುಳಿದು ಗಾಯಗೊಳಿಸಿದೆ ಎನ್ನಲಾಗಿದೆ.

ಗೀತಾ ಅವರ ಹೊಟ್ಟೆ ಮತ್ತು ತಲೆಗೆ ತೀವ್ರ ಗಾಯವಾಗಿದ್ದು, ಹೇಮ ಅವರ ಮುಖ ಮತ್ತು ಬಲ ಕೈಗೆ ಗಂಭೀರ ಪೆಟ್ಟಾಗಿದೆ. ಗಾಯಗೊಂಡ ಮಹಿಳೆಯರನ್ನು ತಕ್ಷಣವೇ ಬೇಲೂರು ಸರ್ಕಾರಿ ದಾಖಲಿಸಲಾಗಿದ್ದು,  ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಈ ಘಟನೆ ಬಳಿಕ, ಬಿಕ್ಕೋಡು ಮತ್ತು ಸುತ್ತಮುತ್ತಲಿನ ರೈತರು ಹಾಗೂ ಕಾಫಿ ಬೆಳೆಗಾರರು ಕಾಡಾನೆ ಹಾವಳಿಯಿಂದ ತೀವ್ರ ಆತಂಕಕ್ಕೊಳಗಾಗಿದ್ದಾರೆ.

ಅರಣ್ಯ ಇಲಾಖೆಯು ತಕ್ಷಣವೇ ಕ್ರಮ ಕೈಗೊಲ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News