ಬೇಲೂರು : ತಾಲೂಕಿನ ಬಿಕ್ಕೋಡು ಹೋಬಳಿ ವ್ಯಾಪ್ತಿಯ ಚೌಡನಹಳ್ಳಿ ಗ್ರಾಮದ ಬಳಿ ಕುರಿಗಳನ್ನು ಮೇಯಿಸಿಕೊಂಡು ಬರುತ್ತಿದ್ದ ಮಹಿಳೆಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.​

ಚೌಡನಹಳ್ಳಿ ಗ್ರಾಮದ ನಿವಾಸಿ ಜಯಮ್ಮ (45) ಮೃತ ಮಹಿಳೆ. ಎಂದಿನಂತೆ ಜಯಮ್ಮ ಅವರು ತಮ್ಮ ಕುರಿಗಳನ್ನು ಮೇಯಿಸಲು ಸಮೀಪದ ತೋಟದಂಚಿನ ಪ್ರದೇಶಕ್ಕೆ ತೆರಳಿದ್ದ ವೇಳೆ ಏಕಾಏಕಿ ಎದುರಾದ ಕಾಡಾನೆ ಅವರ ಮೇಲೆ ದಾಳಿ ನಡೆಸಿದೆ ಎನ್ನಲಾಗಿದೆ.

ಆನೆಯ ದಾಳಿಯ ತೀವ್ರತೆಗೆ ಜಯಮ್ಮ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ​ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಅರೆಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor