ಸಕಲೇಶಪುರ | ಟ್ಯಾಂಕರ್‌ಗೆ ಢಿಕ್ಕಿ ಹೊಡೆದ ಸಾರಿಗೆ ಬಸ್ : 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ಸಕಲೇಶಪುರ : ಸಾರಿಗೆ ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿ 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯವಾಗಿರುವ ಘಟನೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ನಡೆದಿದೆ.
ತಾಲೂಕಿನಲ್ಲಿ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಸಕಲೇಶಪುರದಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಸರಕಾರಿ ಸಾರಿಗೆ ಬಸ್‌ವೊಂದು, ಓವರ್‌ಟೇಕ್ ಮಾಡಲು ಯತ್ನಿಸಿದ ವೇಳೆ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡವರನ್ನು ತಕ್ಷಣವೇ ಹಾಸನ ಹಾಗೂ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಇತರ ಗಾಯಾಳುಗಳಿಗೆ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.