×
Ad

ಚನ್ನಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟ‌ರ್ ಹತ್ಯೆ

Update: 2024-11-14 09:40 IST

ರಖಿತಾ ಆಲಿಯಾಸ್ ಗುಂಡ 

ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟ‌ರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಚನ್ನಪಟ್ಟಣದಲ್ಲಿ ನಿನ್ನೆ ರಾತ್ರಿ ನಡೆದಿದೆ.

ರಖಿತಾ ಆಲಿಯಾಸ್ ಗುಂಡ (34) ಕೊಲೆಯಾದ ರೌಡಿಶೀಟರ್. ನಿನ್ನೆ ರಾತ್ರಿ ಆಟೋದಲ್ಲಿ ಕುಳಿತು ಸ್ನೇಹಿತರೊಂದಿಗೆ ಮದ್ಯ ಸೇವಿಸಿದ್ದ ರಖಿತಾ, ಕುಡಿದ ಮತ್ತಿನಲ್ಲಿ ಸ್ನೇಹಿತರೊಂದಿಗೆ ಜಗಳವಾಡಿದ್ದ ಎನ್ನಲಾಗಿದೆ. 

ಜಗಳ ತಾರಕಕ್ಕೇರಿ ಆತನ ಸ್ನೇಹಿತರೇ ಆತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಈ ಹಿಂದೆ ಆತನ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು.

ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ನಗರ ಠಾಣಾ  ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.

ಆರೋಪಿಗಳ ಪತ್ತೆಗೆ ಶೋಧ ಆರಂಭಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News