Channarayapatna | ಬೈಕ್‌ಗೆ ಬಸ್ ಢಿಕ್ಕಿ; ಹೆಡ್ ಕಾನ್‌ಸ್ಟೇಬಲ್ ಮೃತ್ಯು
Update: 2026-01-30 18:37 IST
ಬೀರಲಿಂಗ (41)
ಹಾಸನ : ಊಟಕ್ಕೆ ಮನೆಗೆ ತೆರಳುತ್ತಿದ್ದ ವೇಳೆ ಹೆಡ್ ಕಾನ್‌ಸ್ಟೇಬಲ್ ಅವರ ಬೈಕ್‌ಗೆ ನಗರ ಸಾರಿಗೆ ಬಸ್ ಢಿಕ್ಕಿಯಾಗಿ, ಮೃತಪಟ್ಟಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಮೃತರನ್ನು ಬೀರಲಿಂಗ (41) ಎಂದು ಗುರುತಿಸಲಾಗಿದೆ. ಅವರು ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಧ್ಯಾಹ್ನ ಊಟಕ್ಕಾಗಿ ಪೊಲೀಸ್ ಕ್ವಾಟರ್ಸ್‌ನಲ್ಲಿರುವ ತಮ್ಮ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಕ್ವಾಟರ್ಸ್‌ಗೆ ತಿರುವು ತೆಗೆದುಕೊಳ್ಳುವ ವೇಳೆ ನಗರ ಸಾರಿಗೆ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಢಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಬೀರಲಿಂಗ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.