ಮಾವಿನಕೆರೆಯಲ್ಲಿ ಚೆನ್ನಮ್ಮ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ; ಜಿಲ್ಲಾಡಳಿತದಿಂದ ಬಿಗಿ ಭದ್ರತೆ

Update: 2026-07-19 13:19 IST

ಹೊಳೆನರಸೀಪುರ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪತ್ನಿ ದಿವಂಗತ ಚೆನ್ನಮ್ಮ ಅವರ ಅಂತ್ಯಕ್ರಿಯೆಗೆ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಗ್ರಾಮದ ಶ್ರೀ ರಂಗನಾಥಸ್ವಾಮಿ ಬೆಟ್ಟದ ತಪ್ಪಲಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಅಂತ್ಯಕ್ರಿಯೆ ನಡೆಯಲಿರುವ ಸ್ಥಳದಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳು ಅಗತ್ಯ ವ್ಯವಸ್ಥೆಗಳನ್ನು ಪೂರ್ಣಗೊಳಿಸಿದ್ದು, ಸಾರ್ವಜನಿಕರು, ರಾಜಕೀಯ ಮುಖಂಡರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಸಂಚಾರ ವ್ಯವಸ್ಥೆ ಸುಗಮವಾಗಿರುವಂತೆ ವಿಶೇಷ ವ್ಯವಸ್ಥೆಗಳನ್ನೂ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News