×
Ad

ಹಾಸನ | ಆಸ್ಪತ್ರೆಯಲ್ಲಿ ಕಳ್ಳತನ ಆರೋಪ : ಯುವಕನಿಗೆ ಥಳಿಸಿದ ಸೆಕ್ಯೂರಿಟಿ ಗಾರ್ಡ್‌, ಕಾನ್ಸ್‌ಟೇಬಲ್‌

Update: 2025-06-15 14:43 IST

ಹಾಸನ: ಆಸ್ಪತ್ರೆಯಲ್ಲಿ ಕಳ್ಳತನ ಮಾಡಿದ ಆರೋಪದಲ್ಲಿ ಯುವಕನೊಬ್ಬನಿಗೆ ಮನಸೋಯಿಚ್ಛೆ ಸೆಕ್ಯೂರಿಟಿ ಗಾರ್ಡ್‌ಗಳು ಹಾಗೂ ಪೊಲೀಸ್‌ ಸಿಬ್ಬಂದಿಯೊಬ್ಬರು ಲಾಠಿಯಿಂದ ಹಲ್ಲೆ ನಡೆಸಿರುವ ಘಟನೆ ಶನಿವಾರ ರಾತ್ರಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಸತತ ಅರ್ಧ ಗಂಟೆಗೂ ಹೆಚ್ಚು ಕಾಲ ಸೆಕ್ಯೂರಿಟಿ ಗಾರ್ಡ್‌ಗಳು ಯುವಕನ್ನು ಥಳಿಸಿದ್ದಾರೆ ಎನ್ನಲಾಗಿದೆ. ಮಳೆಯ ನಡುವೆಯೂ ಆಸ್ಪತ್ರೆಯ ಮುಂಭಾಗ ಲಾಠಿಗಳಿಂದ ಹಲ್ಲೆ ನಡೆಸಿದ ಸೆಕ್ಯೂರಿಟಿ ಗಾರ್ಡ್‌ಗಳ ಏಟಿಗೆ ಕಣ್ಣೀರಿಡುತ್ತಾ ಬೇಡಿಕೊಂಡರೂ ಬಿಡದೇ ಮನಸೋ ಇಚ್ಛೆ ಥಳಿಸಿದ್ದಾರೆ.

ನಂತರ ಆಸ್ಪತ್ರೆಯ ಕೊಠಡಿಯೊಳಗೆ ಕರೆದೊಯ್ದು ಮೃಗೀಯ ವರ್ತನೆ ತೋರಿರುವ ಸೆಕ್ಯೂರಿಟಿ ಗಾರ್ಡ್‌ಗಳು ಕಣ್ಣೀರಿಡುತ್ತಾ ಕಾಲಿಗೆ ಬಿದ್ದು ಬೇಡಿಕೊಂಡರೂ ಬೆನ್ನು, ತಲೆ, ಕಾಲು, ಕೈಗೆ ಹಲ್ಲೆ ನಡೆಸಿದ್ದಾರೆ.

ಸೆಕ್ಯೂರಿಟಿ ಗಾರ್ಡ್‌ಗಳ ಜೊತೆ ಕರ್ತವ್ಯದಲ್ಲಿದ್ದ ಕಾನ್ಸ್‌ಟೇಬಲ್‌ನಿಂದಲೂ ಹಲ್ಲೆ ನಡೆದಿದ್ದು, ಇವರ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News