×
Ad

ಹಾಸನ | ಕೆರೆ ಮೀನು ತಿಂದು ಇಬ್ಬರು ಸಾವು ; 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Update: 2024-05-03 15:26 IST

ಹಾಸನ : ಕೆರೆ ಮೀನು ತಿಂದು ಇಬ್ಬರು ಸಾವು ಹಾಗೂ 15ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಬಸವಹಳ್ಳಿ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಮೃತರನ್ನು ರವಿಕುಮಾರ (46), ಪುಟ್ಟಮ್ಮ 50) ಎಂದು ಗುರುತಿಸಲಾಗಿದೆ. ನೀರಿಲ್ಲದೆ ಬತ್ತಿ ಹೋಗಿದ್ದ ಬಸವನಹಳ್ಳಿ ಗ್ರಾಮದ ಕೆರೆಯ ಕೆಸರಿನಲ್ಲಿದ್ದ ಮೀನನ್ನು ಗ್ರಾಮಸ್ಥರು ಹಿಡಿದಿದ್ದರು. ಮೀನುಗಳನ್ನು ಹಿಡಿದು ಅಡುಗೆ ಮಾಡಿ ಊಟ ಮಾಡಿದ ನಂತರ 15ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. 

ಅಸ್ವಸ್ಥರನ್ನು ಅರಕಲಗೂಡು ಹಾಗೂ ಹಾಸನದ ಆಸ್ಪತ್ರೆಗೆ ದಾಖಲಿದ್ದು, ಗ್ರಾಮಕ್ಕೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಭೇಟಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News