×
Ad

ಹಾಸನ | ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿತ : 15 ಜನ ಆಸ್ಪತ್ರೆಗೆ ದಾಖಲು, ಓರ್ವ ಮಹಿಳೆ ಗಂಭೀರ

Update: 2024-08-11 22:18 IST

ಆಸ್ಪತ್ರೆಗೆ ದಾಖಲಾಗಿರುವ ಮಹಿಳೆಯರು

ಹಾಸನ : ಗದ್ದೆಯಲ್ಲಿ ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 15 ಜನರು ಗಾಯಗೊಂಡು, ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿರುವ ಘಟನೆ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ನಡೆದಿದೆ.

ಲತಾ (35) ಎಂಬುವವರ ಸ್ಥಿತಿ ಗಂಭೀರವಾಗಿದ್ದು, ರೇಣುಕಾ (49), ಸವಿತಾ (45), ಸುಮಿತ್ರ (51), ರೇಣುಕಮ್ಮಾ (55), ನೇತ್ರ (40), ನಿರ್ಮಲ (51), ವೀಣಾ (35), ಅನಿತಾ (55) ಮಂಜುಳ (45), ಪುಷ್ಪ (35) ಭಾಗ್ಯ (45), ಶಾರದಮ್ಮ (55), ಜಯಂತಿ (55) ಗಾಯತರಮ್ಮ (45), ಮಂಜುಳಮ್ಮ(60) ಸೇರಿ ಹದಿನಾರು ಮಂದಿಗೆ ಸಿಡಿಲು ಬಡಿದಿದ್ದು, ಎಲ್ಲರನ್ನೂ ಸಕಲೇಶಪುರ ತಾಲೂಕಿನ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋರ್ಲಗದ್ದೆ ಗ್ರಾಮದ ಕೆ.ಬಿ.ಚಂದ್ರು ಎಂಬುವವರಿಗೆ ಸೇರಿದ ಗದ್ದೆಯಲ್ಲಿ 25 ಮಂದಿ ನಾಟಿ ಮಾಡುತ್ತಿದ್ದರು. ಈ ವೇಳೆ ಗುಡುಗು-ಸಿಡಿಲು ಸಹಿತ ಮಳೆಯಾಗಿದ್ದು, ಸಿಡಿಲು ಬಡಿದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News