×
Ad

ಹಾಸನ | ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ ; ಅಪಾಯದಿಂದ ಪಾರು

Update: 2024-09-28 18:42 IST

ಓಮ್ನಿ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ

ಹಾಸನ : ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಕೂಡಲೇ ರಸ್ತೆಯಲ್ಲಿಯೇ ಕಾರು ನಿಲ್ಲಿಸಿದ್ದಾನೆ. ಎಲ್ಲರೂ ನೋಡನೋಡುತ್ತಿದ್ದಂತೆ ಕಾರು ಹೊತ್ತಿ ಉರಿದು ಕಾರಿನಲ್ಲಿದ್ದ ಮೂವರಿಗೆ ಸಣ್ಣ ಪುಟ್ಟ ಗಾಯವಾಗಿರುವ ಘಟನೆ ತಾಲ್ಲೂಕಿನ ಹೆರಗು ಗ್ರಾಮದಲ್ಲಿ ನಡೆದಿದೆ.

ಆನಳ್ಳಿ ಗ್ರಾಮದ ಅಶೋಕ್ ಎಂಬುವವರಿಗೆ ಸೇರಿದ ಓಮ್ನಿ ಕಾರು ಇದಾಗಿದ್ದು, ಅಶೋಕ್ ಅವರು ತಮ್ಮ ಇಟ್ಟಿಗೆ ಫ್ಯಾಕ್ಟರಿಗೆ ಹೋಗಿ ವಾಪಾಸ್ಸಾಗುತ್ತಿದ್ದರು. ಈ ವೇಳೆ ಹೆರಗು ಗ್ರಾಮದ ಬಳಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಶೋಕ್ ಹಾಗೂ ಇಬ್ಬರು ಸ್ನೇಹಿತರು ತಕ್ಷಣ ಗಾಬರಿಗೊಂಡು ಕಾರು ನಿಲ್ಲಿಸಿ ಕೆಳಗಿಳಿದಿದ್ದಾರೆ. ಘಟನೆಯಿಂದ ಓಮ್ನಿ ಕಾರು ಸಂಪೂರ್ಣ ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News