ಹಾಸನ | 22 ವರ್ಷದ ಯುವತಿ ಹೃದಯಾಘಾತಕ್ಕೆ ಬಲಿ
Update: 2025-06-26 18:42 IST
ಸುಪ್ರಿಯಾ
ಹಾಸನ: 22 ವರ್ಷದ ಯುವತಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವತಿಯನ್ನು ಸುಪ್ರಿಯಾ ಎಂದು ಗುರುತಿಸಲಾಗಿದೆ. ಕಟ್ಟಳ್ಳಿ ಗ್ರಾಮದ ಕೃಷ್ಣಮೂರ್ತಿ-ರೂಪ ದಂಪತಿಯ ಪುತ್ರಿ ಸುಪ್ರಿಯಾ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಿದ್ದರು. ಮುಕ್ತ ವಿವಿಯಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಸುಪ್ರಿಯಾ ವಿದ್ಯಾಭ್ಯಾಸದ ಜೊತೆಗೆ ಕೆಲಸ ಮಾಡುತ್ತಿದ್ದರು.
ಜೂ.25 ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಪೋಷಕರಿಗೆ ಹೇಳಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಪೋಷಕರು ಸುಪ್ರಿಯಾಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಸುಪ್ರಿಯಾ ಮೃತಪಟ್ಟಿದ್ದಾರೆ.