×
Ad

ಹಾಸನ | ಚಾಲಕನ ನಿಯಂತ್ರಣ‌ ತಪ್ಪಿ ಮನೆಯಂಗಳಕ್ಕೆ ನುಗ್ಗಿದ ಬಸ್ : ಓರ್ವ ಸಾವು , 15 ಮಂದಿಗೆ ಗಾಯ

Update: 2024-02-04 13:00 IST

ಹಾಸನ : ಬೆಂಗಳೂರಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಬಾಗೆ ಗ್ರಾಮದಲ್ಲಿ ನಡೆದಿದೆ. 

ಚನ್ನರಾಯಪಟ್ಟಣ ತಾಲೂಕಿನ ಉದಯಪುರ ಗ್ರಾಮದ ಅಮೃತ್‌ರಾಜ್ (34) ಮೃತ ವ್ಯಕ್ತಿ. ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು,  ಗಾಯಾಳುನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ ಶಾಲೆಯ ಕಾಂಪೌಂಡ್‌ ಹಾಗೂ  ಮನೆಗೆ ಢಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದರು ಅಪಾಯದಿಂದ  ಪಾರಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News