×
Ad

Hassan| ಬೈಕ್‌ಗೆ ಜೀಪ್‌ ಢಿಕ್ಕಿ ; ಯುವಕ ಮೃತ್ಯು

Update: 2025-12-01 11:18 IST

ಬೇಲೂರು: ಡಿ,1: ಇಬ್ಬರು ಯುವಕರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ಮುಂಜಾನೆ ಹೊಸಪೇಟೆ ಬಳಿ ಸಂಭವಿಸಿದೆ.

ಮೃತ ಯುವಕನನ್ನು ಅರೇಹಳ್ಳಿ ಹೋಬಳಿಯ ಹಿರೇಹಸಡೆ ಗ್ರಾಮದ ಚಂದನ್ (27) ಎಂದು ಗುರುತಿಸಲಾಗಿದ್ದು, ಭರತ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣವೇ ಹಾಸನದ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ.

ಮಾಹಿತಿಯ ಪ್ರಕಾರ, ಚಂದನ್ ಹಾಗೂ ಭರತ್ ಬೇಲೂರಿನಲ್ಲಿ ತಮ್ಮ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ತಮ್ಮ ಊರಾದ  ಹಿರೇಹಸಡೆ ಗ್ರಾಮದ ಕಡೆಗೆ ಮರಳುತ್ತಿದ್ದಾಗ ಹೊಸಪೇಟೆ ಬಳಿ  ಎದುರಿನಿಂದ ಬಂದ ಜೀಪ್ ನಿಯಂತ್ರಣ ತಪ್ಪಿ ಅವರ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಚಂದನ್ ಸ್ಥಳದಲ್ಲೇ ಮೃತಪಟ್ಟಿದ್ದು, ಭರತ್ ರಸ್ತೆಯ ಬದಿಗೆ ಬಿದ್ದ ಪರಿಣಾಮ ತೀವ್ರ ಗಾಯಗೊಂಡಿದ್ದಾರೆ.

ಅಪಘಾತ ಸಂಭವಿಸಿದ ಬಳಿಕ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ. 

ಅಪಘಾತ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News