×
Ad

ಹಾಸನ | ಪ್ರೀತಿಸಲು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿಯ ಹತ್ಯೆ: ಬಳಿಕ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

Update: 2024-03-04 23:28 IST

ಹಾಸನ : ಪ್ರೀತಿಸಲು ನಿರಾಕರಿಸಿದಕ್ಕೆ 10ನೇ ತರಗತಿ ವಿದ್ಯಾರ್ಥಿನಿಯನ್ನು ಕತ್ತು ಸೀಳಿ ಹತ್ಯೆ ಮಾಡಿದ ಯುವಕ, ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ.

ವಿದ್ಯಾರ್ಥಿನಿ ಶಾಲೆ ಮುಗಿಸಿ ಮನೆಗೆ ಹೋಗುವಾಗ ಅಡ್ಡಗಟ್ಟಿದ ಶರತ್ ಎಂಬ ಯುವಕ ಚಾಕುವಿನಿಂದ ಬಾಲಕಿಯ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾನೆ. ನಂತರ ಅಲ್ಲಿಂದ ಪರಾರಿಯಾದ ಆತ ಚಲಿಸುವ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ.

ಅರಸೀಕೆರೆ ಗ್ರಾಮಾಂತರ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ರೈಲ್ವೆ ಪೊಲೀಸರು ಯುವಕನ ಮೃತದೇಹ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News