×
Ad

ಹಾಸನ: ಹಾಡಹಗಲೇ ರಸ್ತೆಯಲ್ಲಿ ರೌಡಿಶೀಟರ್ ನ ಬರ್ಬರ ಹತ್ಯೆ

Update: 2024-06-05 09:33 IST

ಕೊಲೆ ನಡೆದ ಸ್ಥಳದಲ್ಲಿ ಜನರು ಜಮಾಯಿಸಿರುವುದು

ಹಾಸನ, ಜೂ.5: ಕುಖ್ಯಾತ ರೌಡಿಶೀಟರ್ ಚೈಲ್ಡ್ ರವಿಯನ್ನು ದುಷ್ಕರ್ಮಿಗಳು ಇಂದು ಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ನಗರದ ಹೇಮಾವತಿ ನಗರ ಬಡಾವಣೆಯಲ್ಲಿ ನಡೆದಿದೆ.

ಕುಡಿಯುವ ನೀರು ತರಲೆಂದು ದ್ವಿ ಚಕ್ರ ವಾಹನದಲ್ಲಿ ಹೊರಟಿದ್ದ ರವಿಯನ್ನು ಹಿಂದಿನಿಂದ ವಾಹನ ಢಿಕ್ಕಿ ಹೊಡೆಸಿ ಕೆಳಗೆ ಬೀಳಿಸಿದ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ತಪ್ಪಿಸಿಕೊಳ್ಳಲು ಅವಕಾಶವೇ ಸಿಗದಂತೆ ದಾಳಿ ನಡೆಸಿದ ಇಬ್ಬರು ದುಷ್ಕರ್ಮಿಗಳ ಮಾರಕಾಸ್ತ್ರಗಳ ದಾಳಿಯಿಂದ ರವಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಚೈಲ್ಡ್ ರವಿ ಸಹ್ಯಾದ್ರಿ ಚಿತ್ರಮಂದಿರದ ಎದುರು ನಡೆದಿದ್ದ ಸ್ಲಂ ಮಂಜನ ಹತ್ಯೆ ಸೇರಿದಂತೆ ಕೊಲೆ, ಅತ್ಯಾಚಾರ, ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದನು. ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿದ್ದನು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News