ಹಾಸನ| ಕೌಟುಂಬಿಕ ಕಲಹದ ಹಿನ್ನೆಲೆ ದಂಪತಿ ಆತ್ಮಹತ್ಯೆಗೆ ಯತ್ನ: ಪತ್ನಿ ಮೃತ್ಯು
Update: 2026-01-28 22:06 IST
ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆ ಪತಿ ವಿಷ ಸೇವಿಸಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದರೆ, ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಅದ್ದಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಂಜಿತಾ(25) ಆತ್ಮಹತ್ಯೆ ಮಾಡಿಕೊಂಡವರು. ಈಕೆಯ ಪತಿ ಚೇತನ್ (28) ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಪ್ರೀತಿಸಿ ವಿವಾಹವಾಗಿದ್ದ ದಂಪತಿ ನಡುವೆ ಕಲಹ ಏರ್ಪಟ್ಟು ಮೂರು ದಿನ ಹಿಂದೆ ಚೇತನ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಪತಿಯು ಸಾವು ಬದುಕಿನ ಮಡುವೆ ಹೋರಾಡುತ್ತಿರುವುದನ್ನು ಕಂಡು ರಂಜಿತಾ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.