×
Ad

Hassan | ವಿದ್ಯುತ್ ಆಘಾತ: ಕುಣಿಗಲ್ ವಲಯ ಅರಣ್ಯಾಧಿಕಾರಿ ಮೃತ್ಯು

Update: 2026-06-22 11:28 IST

ಹಾಸನ, ಜೂನ್ 22: ನಗರದ ಸತ್ಯಮಂಗಲ ಬಡಾವಣೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಹೊಸ ಮನೆಗೆ ನೀರು ಉಣಿಸುತ್ತಿದ್ದ ವೇಳೆ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಕುಣಿಗಲ್ ವಲಯ ಅರಣ್ಯಾಧಿಕಾರಿ (RFO) ಜಗದೀಶ್ ಪಿ. (46) ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ನಡೆದಿದೆ.

ಮಾಹಿತಿಯ ಪ್ರಕಾರ, ಜಗದೀಶ್ ಅವರು ಸತ್ಯಮಂಗಲ ಬಡಾವಣೆಯಲ್ಲಿ ಹೊಸ ಮನೆ ನಿರ್ಮಿಸುತ್ತಿದ್ದು, ರಜೆ ದಿನವಾಗಿದ್ದ ಕಾರಣ ಸ್ವತಃ ಮನೆಯ ಗೋಡೆಗಳಿಗೆ ಪೈಪ್ ಮೂಲಕ ನೀರು ಹಾಯಿಸುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ಆಘಾತ ಸಂಭವಿಸಿದೆ ಎನ್ನಲಾಗಿದೆ.

ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಅವರು ಈಗಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದರು.

2015ರ ಬ್ಯಾಚ್ ನ ಅಧಿಕಾರಿಯಾಗಿದ್ದ ಅವರು, 2020ರ ಅವಧಿಯಲ್ಲಿ ಹಾಸನ ಜಿಲ್ಲೆಯಲ್ಲೂ RFO ಆಗಿ ಸೇವೆ ಸಲ್ಲಿಸಿದ್ದರು. ಪ್ರಸಕ್ತ ತುಮಕೂರು ಜಿಲ್ಲೆಯ ಕುಣಿಗಲ್ ನಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯನಿರ್ವಹಿಸುತ್ತಿದ್ದರು.

ಈ ಬಗ್ಗೆ ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News