×
Ad

ಹಾಸನ | ಪತ್ನಿಯನ್ನು ಗುಂಡಿಕ್ಕಿ ಹತ್ಯೆಗೈದು ಪತಿ ಆತ್ಮಹತ್ಯೆ

Update: 2024-06-18 10:57 IST

ಹಾಸನ, ಜೂ.18: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಗೆ ನಾಡ ಬಂದೂಕಿನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ ಪತಿ ತಾನೂ ತಾನು ಆತ್ಮಹತ್ಯೆಗೆ ಶರಣಾದ ಘಟನೆ ಬೇಲೂರು ತಾಲೂಕಿನ, ದೊಡ್ಡಸಾಲಾವರ ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿದೆ.

ಜಾಜಿ (45) ಹತ್ಯೆಯಾದ ಮಹಿಳೆ. ಅವರ ಪತಿ ಹರೀಶ್ ಪೂಜಾರಿ (50) ಕೊಲೆ ಆರೋಪಿಯಾಗಿದ್ದು, ಆತ ಕೂಡಾ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಕಳೆದ ರಾತ್ರಿ ಪತಿ-ಪತ್ನಿಯ ನಡುವಿನ ಜಗಳ ನಿನ್ನೆ ರಾತ್ರಿ ವಿಕೋಪಕ್ಕೆ ತಿರುಗಿದ್ದು, ಆಕ್ರೋಶಗೊಂಡ ಹರೀಶ್ ಪತ್ನಿಗೆ ನಾಡ ಬಂದೂಕಿನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆನ್ನಲಾಗಿದೆ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಂಪತಿಗೆ ಮೂವರು ಮಕ್ಕಳಿದ್ದು, ಎಲ್ಲರೂ ಬೇರೆ ಊರುಗಳಲ್ಲಿ ವ್ಯಾಸಂಗ ಮಾಡುತ್ತಿದ್ದು ಮನೆಯಲ್ಲಿ ಇವರಿಬ್ಬರೇ ಇದ್ದರು. ಗುಂಡಿನ ಶಬ್ದ ಕೇಳಿದ್ದರಿಂದ ಸ್ಥಳೀಯರು ಬಂದು ನೋಡಿದಾಗ ವಿಷಯ ತಿಳಿದಿದೆ.

ಈ ಬಗ್ಗೆ ಅರೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News