×
Ad

ಹಾಸನ: ಬಯಲು ಸೀಮೆ ಭಾಗದಲ್ಲಿ ಹೆಚ್ಚಿದ ಚಿರತೆ ಹಾವಳಿ; ಆತಂಕದಲ್ಲಿ ಗ್ರಾಮಸ್ಥರು

Update: 2024-02-01 10:09 IST

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ, ಮಾಯಗೌಡನಹಳ್ಳಿ ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚುತ್ತಿದ್ದು ಗ್ರಾಮಸ್ಥರು ಆತಂಕದಲ್ಲಿ ದಿನದೂಡುವಂತಾಗಿದೆ.

ಚಿರತೆಯು ಮನೆ ಬಳಿ ಬಂದು ಸಾಕು ನಾಯಿಗಳನ್ನು ಹೊತ್ತೊಯ್ಯುತ್ತಿದ್ದು ಒಂದು ತಿಂಗಳ ಅಂತರದಲ್ಲಿ ನಾಲ್ಕು ನಾಯಿಗಳನ್ನು ಚಿರತೆ ಬೇಟೆಯಾಡಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಬುಧವಾರ ರಾತ್ರಿ ಗ್ರಾಮದ ಕುಮಾರ್ ಎಂಬವರ ಮನೆಯ ಸಾಕುನಾಯಿಯನ್ನು ಚಿರತೆ ಹೊತ್ತೊಯ್ಯುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಬಗ್ಗೆ ದೂರು ನೀಡಿದರೂ ಕ್ರಮ ವಹಿಸದ ಅರಣ್ಯ ಇಲಾಖೆಯ ವಿರುದ್ಧ ಅಸಮಾಧಾನಗೊಂಡಿರುವ ಗ್ರಾಮಸ್ಥರು ಚಿರತೆ ಸೆರೆಗೆ ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News