ಹಾಸನ: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್ಎಫ್ಒ) ಹೇಮಂತ್ಕುಮಾರ್ ರ ಮನೆ ಮತ್ತು ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಾಸನ, ಸಕಲೇಶಪುರ ಹಾಗೂ ಆಲೂರು ಸೇರಿದಂತೆ ಒಟ್ಟು ಐದು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಹಾಸನ ನಗರದ ಚಿಕ್ಕಹೊನ್ನೇನಹಳ್ಳಿಯಲ್ಲಿರುವ ಹೇಮಂತ್ಕುಮಾರ್ ಅವರ ನಿವಾಸ, ಸಕಲೇಶಪುರದಲ್ಲಿರುವ ಬಾಡಿಗೆ ಮನೆ, ಸಕಲೇಶಪುರದ ಅರಣ್ಯ ಇಲಾಖೆ ಕಚೇರಿ, ಆಲೂರು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿರುವ ಹೇಮಂತ್ಕುಮಾರ್ ಅವರ ಮಾವನ ಮನೆ ಹಾಗೂ ಹಾಸನದ ಕುವೆಂಪು ನಗರದಲ್ಲಿರುವ ಹೇಮಂತ್ಕುಮಾರ್ ಅವರ ಆಪ್ತರಾಗಿರುವ ಗುತ್ತಿಗೆದಾರ ಹರೀಶ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ.

ಲೋಕಾಯುಕ್ತ ಎಸ್ಪಿ ನಂದಿನಿ, ಡಿವೈಎಸ್ಪಿ ಸುರೇಶ್ ಹಾಗೂ ಇನ್ಸ್ಪೆಕ್ಟರ್ಗಳಾದ ಶಿಲ್ಪಾ, ಗವಿರಾಜು ಮತ್ತು ಚಂದ್ರಶೇಖರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮಲ್ನಾಡ್ ಮೆಹಬೂಬ್/ವಾರ್ತಾಭಾರತಿ

ಹಾಸನ ಜಿಲ್ಲಾ ವರದಿಗಾರರು

ಮಲ್ನಾಡ್ ಮೆಹಬೂಬ್ ಅವರು ಕಳೆದ 25 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಹಾಸನ ಜಿಲ್ಲೆಯಲ್ಲಿ ವಾರ್ತಾಭಾರತಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದಾರೆ.