Hassan| ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಹಾಸನ: ಕೆರೆಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಲೂರು ತಾಲೂಕಿನ ಪಾಳ್ಯ ಗ್ರಾಮದ ದ್ಯಾವನಕಟ್ಟೆ ಗ್ರಾಮದಲ್ಲಿ ನಡೆದಿದೆ.
ರವಿ (38) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕೂಲಿ ಕೆಲಸ ಮಾಡಿಕೊಂಡಿದ್ದ ರವಿ ವಿಪರೀತ ಮದ್ಯವ್ಯಸನಿಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಸರಿಯಾಗಿ ಕೆಲಸಕ್ಕೂ ಹೋಗದೆ ಮನೆಯಲ್ಲೇ ಇರುತ್ತಿದ್ದ ಎನ್ನಲಾಗಿದೆ.
ಮದ್ಯಪಾನ ಬಿಡುವಂತೆ ಪೋಷಕರು ಪದೇ ಪದೇ ಬುದ್ದಿವಾದ ಹೇಳುತ್ತಿದ್ದರು. ಇದರಿಂದ ಮನನೊಂದ ರವಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.