×
Ad

ಹಾಸನ | ಮದುವೆಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ : 20ಕ್ಕೂ ಹೆಚ್ಚು ಮಂದಿಗೆ ಗಾಯ

Update: 2025-10-30 13:53 IST

ಹಾಸನ : ಮಿನಿ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡ ಘಟನೆ ಸಕಲೇಶಪುರ ತಾಲ್ಲೂಕಿನ ಬಿಸಿಲೆಘಾಟ್‌ನಲ್ಲಿ ಗುರುವಾರ ಸಂಭವಿಸಿದೆ.

ಅಪಘಾತದಲ್ಲಿ ಒಬ್ಬರ ಕಾಲು ತುಂಡಾಗಿದ್ದು, ನಾಲ್ವರಿಗೆ ಗಂಭೀರವಾಗಿ ಗಾಯವಾಗಿದೆ. ಮಡ್ಡಿಕೆರೆ ಮತ್ತು ವನಗೂರು ಗ್ರಾಮಗಳಿಂದ KA-12-B-2579 ನಂಬರಿನ ಮಿನಿ ಬಸ್‌ನಲ್ಲಿ ಮೂವತ್ತಕ್ಕೂ ಹೆಚ್ಚು ಮಂದಿ ಮದುವೆಗೆ ತೆರಳುತ್ತಿದ್ದ ವೇಳೆ ಬಿಸಿಲೆಘಾಟ್‌ನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಕೆಳಗಿನ ರಸ್ತೆಗೆ ಬಿದ್ದಿದೆ ಎಂದು ತಿಳಿದು ಬಂದಿದೆ.

ಈ ದುರ್ಘಟನೆಯಲ್ಲಿ 20 ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಸುಬ್ರಹ್ಮಣ್ಯ ಆಸ್ಪತ್ರೆಗೆ ಸಾಗಿಸಲಾಯಿತು. ಗಂಭೀರವಾಗಿ ಗಾಯಗೊಂಡ ಕೆಲವರನ್ನು ಹೆಚ್ಚಿನ ಚಿಕಿತ್ಸೆಯ ಸಲುವಾಗಿ ಮಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News