×
Ad

ಹಾಸನ | ಚಲಿಸುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿ: 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Update: 2026-05-16 10:39 IST

ಹಾಸನ, ಮೇ 16: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಏಕಾಏಕಿ ಬೆಂಕಿಗಾಹುತಿಯಾದ ಘಟನೆ ತಾಲೂಕಿನ ಶಾಂತಿಗ್ರಾಮ ಸಮೀಪ ಶುಕ್ರವಾರ ತಡರಾತ್ರಿ ನಡೆದಿದೆ.

ಚಾಲಕನ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 36 ಮಂದಿ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾಹಿತಿಯಂತೆ, ಮಂಗಳೂರಿನಿಂದ ಬೆಂಗಳೂರಿನತ್ತ ಸಂಚರಿಸುತ್ತಿದ್ದ ಖಾಸಗಿ ಬಸ್ಸಿನ ಟೈಯರ್ ಸ್ಫೋಟಗೊಂಡ ಪರಿಣಾಮ ಮೊದಲು ಹೊಗೆ ಕಾಣಿಸಿಕೊಂಡಿದೆ. ಬಳಿಕ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತೆನ್ನಲಾಗಿದೆ. ಪರಿಸ್ಥಿತಿಯನ್ನು ಗಮನಿಸಿದ ಚಾಲಕ ತಕ್ಷಣ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಿದ್ದರೂ, ಕೆಲ ಪ್ರಯಾಣಿಕರ ಮೊಬೈಲ್ ಫೋನ್, ಲಗೇಜ್ ಹಾಗೂ ಇತರೆ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿ ಪರಿಶೀಲನೆ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News