×
Ad

ಹಾಸನ | ಮನೆಯಲ್ಲಿ ನಿಗೂಢ ಸ್ಫೋಟ; ಗಂಭೀರ ಗಾಯಗೊಂಡಿದ್ದ ದಂಪತಿ ಮೃತ್ಯು

Update: 2025-10-01 11:39 IST

ಹಾಸನ: ಹಳೇಆಲೂರು ಪಟ್ಟಣದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಸುದರ್ಶನ್ (32) ಮತ್ತು  ಕಾವ್ಯ (27) ಮೃತಪಟ್ಟ ದಂಪತಿ. ಇವರನ್ನು ಗಾಯಗೊಂಡ ತಕ್ಷಣವೇ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಯಿತು. 

ಆದರೆ ಚಿಕಿತ್ಸೆ ಫಲಕಾರಿಯಾಗದೆ ದಂಪತಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಈ ಘಟನೆಯಿಂದಾಗಿ ಹದಿನಾಲ್ಕು ತಿಂಗಳ ಮಗು ಅನಾಥವಾಗಿದೆ.

ಸೋಮವಾರ ರಾತ್ರಿ ಸುಮಾರು 8.30ಕ್ಕೆ ಸ್ಫೋಟ ಸಂಭವಿಸಿದ್ದು, ಘಟನೆಗೆ ಮೂಲ ಕಾರಣ ಇನ್ನೂ ತಿಳಿದುಬಂದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News